DKMUL Recruitment 2021: 80 ವ್ಯವಸ್ಥಾಪಕ, ಅಧಿಕಾರಿ ಮತ್ತು ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಲ್ಲಿ 80 ಹುದ್ದೆಗಳ ನೇಮಕಾತಿ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಲ್ಲಿ ವಿವಿಧ 80 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜೂನ್ 29,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:

ಬಿ.ವಿ.ಎಸ್ಸಿ, ಎ.ಹೆಚ್, ಬಿ.ಎಸ್ಸಿ, ಬಿ.ಟೆಕ್, ಎಂ.ಎಸ್ಸಿ, ಬಿ.ಇ, ಪದವಿ, ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ, ಬಿ.ಕಾಂ, ಬಿಬಿಎಂ, ಎಂಬಿಎ, ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ-2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಮತ್ತು ವಿಧವೆ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಸಹಾಯಕ ವ್ಯವಸ್ಥಾಪಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,650/- ರಿಂದ 97,100/-ರೂ,
ತಾಂತ್ರಿಕ ಅಧಿಕಾರಿಗಳು, ತಾಂತ್ರಿಕಾಧಿಕಾರಿ (ಪರಿಸರ), ತಾಂತ್ರಿಕ ಅಧಿಕಾರಿ (ಇಂಜಿನಿಯರಿಂಗ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 43,100/- ರಿಂದ 83,900/-ರೂ, ವಿಸ್ತರಣಾಧಿಕಾರಿ ದರ್ಜೆ -III, ಡೈರಿ ಸೂಪರ್‌ವೈಸರ್ ದರ್ಜೆ-IIಹುದ್ದೆಗಳಿಗೆ ತಿಂಗಳಿಗೆ 33,450/- ರಿಂದ 62,600/-ರೂ, ಆಡಳಿತ ಸಹಾಯಕರು ದರ್ಜೆ-II, ಕೆಮಿಸ್ಟ್ ದರ್ಜೆ -II, ಲೆಕ್ಕ ಸಹಾಯಕರು ದರ್ಜೆ-II ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂ ಮತ್ತು ಕಿರಿಯ ತಾಂತ್ರಿಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 800/-ರೂ, ಪ.ಜಾ/ಪ.ಪಂ/ಪ್ರ-1ರ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಜೂನ್ 30,2021ರ ಸಂಜೆ 5:30ರೊಳಗೆ ಪಾವತಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.dkmul.com/index.html ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 29,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
DKMUL recruitment 2021 notification has been released for 80 manager, officer and technician posts. Interested candidates can apply before June 29.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+