DRDO ADE Recruitment 2019 : 10 ರಿಸರ್ಚ್ ಅಸೋಸಿಯೇಟ್ ಮತ್ತು ಜೆಆರ್‌ಎಫ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಓ), 10 ರಿಸರ್ಚ್ ಅಸೋಸಿಯೇಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಅಕ್ಟೋಬರ್ 20,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಆಭ್ಯರ್ಥಿಗಳು ಮಾತ್ರ ಸಂದರ್ಶನಕ್ಕೆ ಹಾಜರಾಗಲು ಅರ್ಹರು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಡಿಆರ್‌ಡಿಓ ರಿಸರ್ಚ್ ಅಸೋಸಿಯೇಟ್ ಮತ್ತು ಜೆಆರ್‌ಎಫ್‌ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ರಿಸರ್ಚ್ ಅಸೋಸಿಯೇಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ
Organisation ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಓ)
Educational Qualification ಪಿ.ಹೆಚ್‌ಡಿ / ಎಂ.ಇ/ಎಂ.ಟೆಕ್ ಮತ್ತು ಬಿ.ಇ /ಬಿ,ಟೆಕ್ /ಎಂ.ಇ /ಎಂ.ಟೆಕ್
Job Location ಕರ್ನಾಟಕ (ಬೆಂಗಳೂರು)
Salary Scale ರಿಸರ್ಚ್ ಅಸೋಸಿಯೇಟ್- ತಿಂಗಳಿಗೆ 54,000/- ರೂ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ-ತಿಂಗಳಿಗೆ 31,000/-ರೂ
Application Start Date September 30, 2019
Application End Date October 20, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪಿ.ಹೆಚ್‌ಡಿ / ಎಂ.ಇ/ಎಂ.ಟೆಕ್ ಮತ್ತು ಬಿ.ಇ /ಬಿ,ಟೆಕ್ /ಎಂ.ಇ /ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 54,000/- ರೂ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 10/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಜನಾಂಗದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡಿಆರ್‌ಡಿಓ ಅಧಿಕೃತ ವೆಬ್‌ಸೈಟ್‌ https://www.drdo.gov.in/drdo/English/index.jsp?pg=homebody.jsp ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 20,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸಂದರ್ಶನ ವಿವರ :

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾತ್ರ ಸಂದರ್ಶನಕ್ಕೆ ಹಾಜರಾಗಲು ಅವಕಾಶವಿರುತ್ತದೆ.

ಸಂದರ್ಶನ ದಿನಾಂಕ : ನವೆಂಬರ್ 5 ಮತ್ತು 6,2019

ಸಂದರ್ಶನ ನಡೆಯುವ ಸ್ಥಳ:
ಎಡಿಇ, ಡಿಆರ್‌ಡಿಓ,ರಾಮನ್‌ ಗೇಟ್,
ಸುರಂಜನ್‌ದಾಸ್ ರೋಡ್,
ಹೊಸ ತಿಪ್ಪಸಂದ್ರ ಪೋಸ್ಟ್,
ಬೆಂಗಳೂರು-560075.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
DRDO ADE Recruitment 2019-20:Apply Online for 10 RA & JRF Vacancies. Defence Research Development (DRDO ADE) invited Online applications from eligible and interested candidates to fill up RA & JRF Posts through DRDO ADE official notification September 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+