ಡಿಆರ್‌ಡಿಓ ಎಡಿಇ ನೇಮಕಾತಿ 2019 : 80 ಹುದ್ದೆಗಳಿಗೆ ಅರ್ಜಿ ಆಹ್ವಾನ

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಓ), ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ (ಎಡಿಇ) ಮೂಲಕ ಖಾಲಿ ಇರುವ 80 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಪದವಿ, ಡಿಪ್ಲೊಮಾ ಮತ್ತು ಐಟಿಐ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಸೆಪ್ಟೆಂಬರ್ 7,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಡಿಆರ್‌ಡಿಓ ನೇಮಕಾತಿ : 80 ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಪ್ರೆಂಟಿಸ್
Organisation ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಓ)
Educational Qualification ಪದವಿ,ಡಿಪ್ಲೋಮಾ ಮತ್ತು ಐಟಿಐ
Job Location ಬೆಂಗಳೂರು (ಕರ್ನಾಟಕ)
Salary Scale ಗ್ರಾಜುಯೇಟ್ ಅಪ್ರೆಂಟಿಸ್ -ತಿಂಗಳಿಗೆ 4,984/-ರೂ, ಡಿಪ್ಲೋಮಾ ಅಪ್ರೆಂಟಿಸ್ ಟ್ರೈನಿ -ತಿಂಗಳಿಗೆ 3,532/- ರೂ ಮತ್ತು ಐಟಿಐ ಅಪ್ರೆಂಟಿಸ್ ಟ್ರೈನಿ - ಸರ್ಕಾರದ ನಿಯಮಾನುಸಾರ ಸ್ಟೈಫೆಂಡ್
Application Start Date August 26, 2019
Application End Date September 7, 2019

ಶೈಕ್ಷಣಿಕ ವಿದ್ಯಾರ್ಹತೆ:

ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಪದವಿ, ಡಿಪ್ಲೋಮಾ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಡಿಪ್ಲೋಮಾ ಮತ್ತು ಐಟಿಐ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಸೆಪ್ಟೆಂಬರ್ 7,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 4,984/-ರೂ, ಡಿಪ್ಲೋಮಾ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 3,532/- ರೂ ಮತ್ತು ಐಟಿಐ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಸರ್ಕಾರದ ನಿಯಮಾನುಸಾರ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡಿಆರ್‌ಡಿಓ ಅಧಿಕೃತ ವೆಬ್‌ಸೈಟ್‌ https://www.drdo.gov.in/drdo/English/index.jsp?pg=homebody.jsp ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 7,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
DRDO ADE recruitment 2019 notification has been released on official website for the recruitment of 80 apprentice posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X