DRDO: 1817 ಹುದ್ದೆಗಳ ನೇಮಕಾತಿ...ತಿಂಗಳಿಗೆ 56,900/-ರೂ ವೇತನ..ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಓ) ಸಿಇಪಿಟಿಎಎಂ, 1817 ಮಲ್ಟಿ ಟಾಸ್ಕಿಂಗ್ ಸ್ಪಾಫ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಇಂದಿನಿಂದ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 23,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

1817 ಹುದ್ದೆಗಳಿಗೆ ಅರ್ಜಿ ಆಹ್ವಾನ..ಜ.23ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಮಲ್ಟಿ ಟಾಸ್ಕಿಂಗ್ ಸ್ಪಾಫ್
Organisation ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಓ)
Educational Qualification ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಐಟಿಐ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 18,000/-ರಿಂದ 56,900/-ರೂ
Application Start Date December 23, 2019
Application End Date January 23, 2020

ಶೈಕ್ಷಣಿಕ ವಿದ್ಯಾರ್ಹತೆ:

ಮಲ್ಟಿ ಟಾಸ್ಕಿಂಗ್ ಸ್ಪಾಫ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಮಲ್ಟಿ ಟಾಸ್ಕಿಂಗ್ ಸ್ಪಾಫ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರಿಂದ 56,900/-ರೂ ವೇತನ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಜನಾಂಗದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಓ) ಸಿಇಪಿಟಿಎಎಂ ನೇಮಕಾತಿಯ ಮಲ್ಟಿ ಟಾಸ್ಕಿಂಗ್ ಸ್ಪಾಫ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡಿಆರ್‌ಡಿಓ ನ ಅಧಿಕೃತ ವೆಬ್‌ಸೈಟ್‌ https://www.drdo.gov.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜನವರಿ 23,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
DRDO CEPTAM recruitment 2019 notification has been released on official website for the recruitment of 1817 multi tasking staff posts. Interested candidates can apply through online before 23rd January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+