ಡಿಆರ್‌ಡಿಒ ಸಿಇಪಿಟಿಎಎಂ ನಲ್ಲಿ 1901 ಟೆಕ್ನೀಶಿಯನ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 3,2022 ರಿಂದ ಸೆಪ್ಟೆಂಬರ್ 23,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

DRDO CEPTAM ನೇಮಕಾತಿ 2022 ವಿದ್ಯಾರ್ಹತೆ :
ಡಿಆರ್‌ಡಿಒ ಸಿಇಪಿಟಿಎಎಂ ನೇಮಕಾತಿಯ ಟೆಕ್ನೀಶಿಯನ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಬಿ.ಎಸ್ಸಿ, ಡಿಪ್ಲೋಮಾ, ಐಟಿಐ, ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
DRDO CEPTAM ನೇಮಕಾತಿ 2022 ವಯೋಮಿತಿ :
ಡಿಆರ್‌ಡಿಒ ಸಿಇಪಿಟಿಎಎಂ ನೇಮಕಾತಿಯ ಟೆಕ್ನೀಶಿಯನ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
DRDO CEPTAM ನೇಮಕಾತಿ 2022 ವೇತನ :
ಡಿಆರ್‌ಡಿಒ ಸಿಇಪಿಟಿಎಎಂ ನೇಮಕಾತಿಯ ಟೆಕ್ನೀಶಿಯನ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 1,12,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
DRDO CEPTAM ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಡಿಆರ್‌ಡಿಒ ಸಿಇಪಿಟಿಎಎಂ ನೇಮಕಾತಿಯ ಟೆಕ್ನೀಶಿಯನ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಿರುಪಟ್ಟಿಯನ್ನು ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ/ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
DRDO CEPTAM ನೇಮಕಾತಿ 2022 ಅರ್ಜಿ ಶುಲ್ಕ :
ಡಿಆರ್‌ಡಿಒ ಸಿಇಪಿಟಿಎಎಂ ನೇಮಕಾತಿಯ ಟೆಕ್ನೀಶಿಯನ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
DRDO CEPTAM ನೇಮಕಾತಿ 2022 ಅರ್ಜಿ ಸಲ್ಲಿಕೆ :
ಡಿಆರ್‌ಡಿಒ ಸಿಇಪಿಟಿಎಎಂ ನೇಮಕಾತಿಯ ಟೆಕ್ನೀಶಿಯನ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://drdo.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಸೆಪ್ಟೆಂಬರ್ 3,2022 ರಿಂದ ಸೆಪ್ಟೆಂಬರ್ 23,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











