ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ಮೆಂಟ್ ನೇಮಕಾತಿ 351 ಟೆಕ್ನೀಶಿಯನ್ 'ಎ' ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜೂನ್ 26,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗೆಗೆ ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಟೆಕ್ನೀಶಿಯನ್ 'ಎ' |
| Organisation | ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ಮೆಂಟ್ ಆರ್ಗನೈಸೇಶನ್ |
| Educational Qualification | ಹತ್ತನೇ ತರಗತಿ, ಐಟಿಐ |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 28,000/-ರೂ |
| Application Start Date | June 3, 2019 |
| Application End Date | June 26, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಟೆಕ್ನೀಶಿಯನ್ 'ಎ' ಹುದ್ದೆಗಳಿಗೆ ಹತ್ತನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಜೂನ್ 26,2019 ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 28,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಿಬಿಟಿ, ಟ್ರೇಡ್ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ / ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.drdo.gov.in/drdo/English/index.jsp?pg=homebody.jsp
ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 26,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











