ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರೆಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಜಿಸಿ) 59 ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಜನವರಿ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಜನವರಿ 1,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 700/-ರೂ ಅರ್ಜಿ ಶುಲ್ಕ ಮತ್ತು ಪ.ಜಾ/ಪ.ಪ/ಅಂಗವಿಕಲ ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.ecgcltd.in/ecgcportal/Login.jsp ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 1 ರಿಂದ ಜನವರಿ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











