ಮಾಜಿ ಸೈನಿಕರ ಅಂಶುದಾಯಿ ಆರೋಗ್ಯ ಯೋಜನೆ (ಇಸಿಹೆಚ್ಎಸ್), 3 ಆಫೀಸರ್ ಇನ್ ಚಾರ್ಜ್, ವೈದ್ಯಾಧಿಕಾರಿ ಮತ್ತು ಗುಮಾಸ್ತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ನೋಡಿ.

ವಿದ್ಯಾರ್ಹತೆ:
ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://echs.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಕಚೇರಿ ವಿಳಾಸ:
Stn HQ ECHS,
C/o Air force station yelahanka,
Bengaluru,
Karnataka-560063.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











