ಎಕ್ಸ್-ಸರ್ವೀಸ್ ಮೆನ್ ಕಾಂಟ್ರಿಬ್ಯುಟರ್ ಹೆಲ್ತ್ ಸ್ಕೀಮ್ (ಇಸಿಹೆಚ್ಎಸ್) 46 ವೈದ್ಯಕೀಯ ಅಧಿಕಾರಿ, ಡ್ರೈವರ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ವಿವಿಧ ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಆಯ್ಕೆ ಪ್ರಕ್ರಿಯೆ:
ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಫೆಬ್ರವರಿ 15,2021 ಮತ್ತು ಫೆಬ್ರವರಿ 16,2021ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://echs.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 10,2021ರೊಳಗೆ ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Station Headquarters,
ECHS, Command Hospital Airforce, Cambridge Road,
Bengaluru-07.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











