ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL) 200 ಜ್ಯೂನಿಯರ್ ಟೆಕ್ನಿಕಲ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಇಸಿಐಎಲ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಕ್ಟೋಬರ್ 11,2019ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
CRITERIA | DETAILS |
Name Of The Posts | ಜ್ಯೂನಿಯರ್ ಟೆಕ್ನಿಕಲ್ ಅಧಿಕಾರಿ |
Organisation | ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL) |
Educational Qualification | ಇಂಜಿನಿಯರಿಂಗ್‌ನಲ್ಲಿ ಪದವಿ |
Job Location | ಭಾರತದೆಲ್ಲೆಡೆ |
Salary Scale | ಜ್ಯೂನಿಯರ್ ಟೆಕ್ನಿಕಲ್ ಅಧಿಕಾರಿ-ತಿಂಗಳಿಗೆ 20,072/- ರೂ |
Application Start Date | October 4, 2019 |
Application End Date | October 11, 2019 |
ವಿದ್ಯಾರ್ಹತೆ:
ಜ್ಯೂನಿಯರ್ ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್‌ನಲ್ಲಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸೆಪ್ಟೆಂಬರ್ 30,1989ರ ನಂತರ ಜನಿಸಿರಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಜ್ಯೂನಿಯರ್ ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,072/- ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಕಿರುಪಟ್ಟಿಯನ್ನು ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲೆಗಳ ಪರಿಶೀಲನೆಗೆ ಕರೆಯಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL)ನ ಅಧಿಕೃತ ವೆಬ್‌ಸೈಟ್ http://www.ecil.co.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 11,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.