ECIL Recruitment 2019: 15 ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅ.21ಕ್ಕೆ ವಾಕ್-ಇನ್ ಇಂಟರ್ವ್ಯೂ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್‌) 15 ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 21ರಂದು ನೇರ ಸಂದರ್ಶನವನ್ನು ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆ ಓದಿಕೊಂಡು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಇಸಿಐಎಲ್‌ 15 ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅ.21ಕ್ಕೆ ನೇರ ಸಂದರ್ಶನ

 

CRITERIA DETAILS
Name Of The Posts ತಾಂತ್ರಿಕ ಅಧಿಕಾರಿ
Organisation ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್‌)
Educational Qualification ಇಂಜಿನಿಯರಿಂಗ್‌ ಪದವಿ
Job Location ಬೆಂಗಳೂರು,ಮುಂಬೈ,ನವದೆಹಲಿ,ವಿಶಾಕಪಟ್ಟಣಂ
Salary Scale ತಿಂಗಳಿಗೆ 23,000/- ರೂ
Application Start Date October 12, 2019
Application End Date October 21, 2019

ಶೈಕ್ಷಣಿಕ ವಿದ್ಯಾರ್ಹತೆ:

ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ / ಇಲೆಕ್ಟ್ರಾನಿಕ್ಸ್‌ ವಿಷಯದಲ್ಲಿ ಇಂಜಿನಿಯರಿಂಗ್‌ ಪದವಿಯನ್ನು ಶೇ.60ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಸೆಪ್ಟೆಂಬರ್ 30,2019ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಓಬಿಸಿ /ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು/ಅಂಗವಿಕಲ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/- ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಸಂದರ್ಶನದ ವಿವರ:

ಹುದ್ದೆಗಳಿಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳು ಇಸಿಐಎಲ್‌ನ ಅಧಿಕೃತ ವೆಬ್‌ಸೈಟ್‌ http://www.ecil.co.in/ ಗೆ ಹೋಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 21,2019 ರಂದು ಬೆಳಗ್ಗೆ 9:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:

ಇಸಿಐಎಲ್‌ ಬ್ರಾಂಚ್ ಕಛೇರಿ,

ನಂ.1/1,2ನೇ ಮಹಡಿ,

ಎಲ್‌ಐಸಿ ಕಟ್ಟಡ,

ಸಂಪಿಗೆ ರಸ್ತೆ,

ಬೆಂಗಳೂರು-560003,

ಸಹಾಯ ವಾಣಿ- 080-23460110

 

ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ನೋಡಿ

ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
ECIL recruitment notification has been released on official website for the recruitment of 15 technical officer posts. Interested candidates can attend walk-in interview on 21st october 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more