ECIL Recruitment 2020: 350 ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಆ.30ರೊಳಗೆ ಅರ್ಜಿ ಹಾಕಿ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್‌) 350 ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆ ಓದಿಕೊಂಡು ನಂತರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಸಿಐಎಲ್ ನಲ್ಲಿ  350 ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಆಗಸ್ಟ್ 31,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/- ರೂ, ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಕೆಯ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳು ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್‌) ಅಧಿಕೃತ ವೆಬ್‌ಸೈಟ್‌ http://www.ecil.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
ECIL recruitment 2020 notification has been released for 350 technical officer posts. Interested candidates can apply through online before August 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X