ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) 25 ಟೆಕ್ನಿಕಲ್ ಅಧಿಕಾರಿ ಮತ್ತು ಲಯೇಶನ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 3,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಹುದ್ದೆಗಳ ವಿವರ:
ಟೆಕ್ನಿಕಲ್ ಅಧಿಕಾರಿ - 24 ಹುದ್ದೆಗಳು
ಲಯೇಶನ್ ಅಧಿಕಾರಿ - 1 ಹುದ್ದೆ
ಒಟ್ಟು 25 ಹುದ್ದೆಗಳು
ವಿದ್ಯಾರ್ಹತೆ:
ಪದವಿ ಮತ್ತು ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 30 ವರ್ಷ ಮತ್ತು ಲಯೇಶನ್ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನ:
ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/-ರೂ ಮತ್ತು ಲಯೇಶನ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 75,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.ecil.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 3,2020ರೊಳಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











