ECIL Recruitment 2020: 65 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) 65 ಟೆಕ್ನಿಕಲ್ ಅಧಿಕಾರಿ, ಸೈಂಟಿಫಿಕ್ ಅಸಿಸ್ಟೆಂಟ್ -ಎ, ಜ್ಯೂನಿಯರ್ ಆರ್ಟಿಸನ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 2,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಪಡೆಯಲು ಮುಂದೆ ಓದಿ.

ಇಸಿಐಎಲ್ ನಲ್ಲಿ ಉದ್ಯೋಗಾವಕಾಶ....ನ.2ರೊಳಗೆ ಅರ್ಜಿ ಹಾಕಿ

ಹುದ್ದೆಗಳ ವಿವರ:

ಟೆಕ್ನಿಕಲ್ ಅಧಿಕಾರಿ - 24 ಹುದ್ದೆಗಳು
ಸೈಂಟಿಫಿಕ್ ಅಸಿಸ್ಟೆಂಟ್ - ಎ - 13 ಹುದ್ದೆಗಳು
ಜ್ಯೂನಿಯರ್ ಆರ್ಟಿಸನ್ - 28 ಹುದ್ದೆಗಳು
ಒಟ್ಟು 65 ಹುದ್ದೆಗಳು

ವಿದ್ಯಾರ್ಹತೆ:

ಇಂಜಿನಿಯರಿಂಗ್ ಪದವಿ, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಸೆಪ್ಟೆಂಬರ್ 30,2020ರ ಅನ್ವಯ ಗರಿಷ್ಟ 25 ಮತ್ತು 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ:

ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/-ರೂ, ಸೈಂಟಿಫಿಕ್ ಅಸಿಸ್ಟೆಂಟ್-ಎ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,864/-ರೂ ಮತ್ತು ಜೂನಿಯರ್ ಆರ್ಟಿಸನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,070/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.ecil.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 2,2020ರೊಳಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ECIL recuitment 2020 notification has been released for 65 technical officer, scientific assistant and junior artisan posts. Interested candidates can apply through online before November 2.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+