ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) 180 ಗ್ರಾಜುಯೇಟ್ ಇಂಜಿನಿಯರ್/ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಜನವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಜನವರಿ 31,2021ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಸ್ಟೈಫೆಂಡ್:
ಗ್ರಾಜುಯೇಟ್ ಇಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,000/-ರೂ ಮತ್ತು ಟೆಕ್ನೀಶಿಯನ್ (ಡಿಪ್ಲೋಮಾ) ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/-ರೂ ಸ್ಟೈಫೆಂಡ್ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.mhrdnats.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 15,2021ರೊಳಗೆ ಅರ್ಜಿ ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications