ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) 2 ಟೆಕ್ನಿಕಲ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 21,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ:
ಡಿಸೆಂಬರ್ 31,2020ರ ಅನ್ವಯ ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಸಂದರ್ಶನದ ವಿವರ:
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜನವರಿ 21,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ನಡೆಯುವ ಸ್ಥಳದ ವಿಳಾಸವನ್ನು ಅಧಿಸೂಚನೆಯಲ್ಲಿ ಓದಿ ಪಡೆಯಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.