ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) 650 ಟೆಕ್ನಿಕಲ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಜನವರಿ 31,2021ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://ecil.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 15,2021ರ ಮಧ್ಯಾಹ್ನ 2 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











