ECIL Recruitment 2021: 7 ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) 7 ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಫೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಇಸಿಐಎಲ್ ನಲ್ಲಿ ಉದ್ಯೋಗಾವಕಾಶ..ಫೆ.26ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್/ಪಿಜಿ ಪದವಿ/ಎಂಬಿಎ/ಪಿಜಿ ಡಿಪ್ಲೋಮಾ ಮತ್ತು ಪೋಸ್ಟ್ ಗ್ರಾಜುಯೇಟ್/ಎಂಬಿಎ/ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 43,200/- ರಿಂದ 2,16,600/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.ecil.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಮಾರ್ಚ್ 9,2021ರ ಸಂಜೆ 4 ಗಂಟೆಯೊಳಗೆ ಕಚೇರಿಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Additional general manager & In-charge,
HR personnel group,
administrative office,
Electronics corporation of india limited ECIL (post),
Hyderabad-500062,
Telangana.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
ECIL recruitment 2021 notification has been released for 7 general manager posts. Interested candidates can apply before February 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X