ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) ನಲ್ಲಿ 21 ಜ್ಯೂನಿಯರ್ ಆರ್ಟಿಸನ್, ಸೈಂಟಿಫಿಕ್ ಅಸಿಸ್ಟೆಂಟ್ ಮತ್ತು ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 4,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ECIL ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:
ತಾಂತ್ರಿಕ ಅಧಿಕಾರಿ - 12 ಹುದ್ದೆಗಳು
ಸೈಂಟಿಫಿಕ್ ಅಸಿಸ್ಟೆಂಟ್ - 4 ಹುದ್ದೆಗಳು
ಜ್ಯೂನಿಯರ್ ಆರ್ಟಿಸನ್ - 5 ಹುದ್ದೆಗಳು
ಒಟ್ಟು 21 ಹುದ್ದೆಗಳು
ECIL ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :
ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) ಜ್ಯೂನಿಯರ್ ಆರ್ಟಿಸನ್, ಸೈಂಟಿಫಿಕ್ ಅಸಿಸ್ಟೆಂಟ್ ಮತ್ತು ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಸಂದರ್ಶನ ನಡೆಸಲಾಗುತ್ತಿದೆ. ಈ ಸಂದರ್ಶನಕ್ಕೆ ಅಕ್ಟೋಬರ್ 31,2021ರ ಅನ್ವಯ ಇಂಜಿನಿಯರಿಂಗ್ ಪದವಿ, ಡಿಪ್ಲೋಮಾ, ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ECIL ನೇಮಕಾತಿ 2021 ವಯೋಮಿತಿ :
ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) ಜ್ಯೂನಿಯರ್ ಆರ್ಟಿಸನ್, ಸೈಂಟಿಫಿಕ್ ಅಸಿಸ್ಟೆಂಟ್ ಮತ್ತು ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುತ್ತಿರುವ ನೇರ ಸಂದರ್ಶನಕ್ಕೆ ಅಕ್ಟೋಬರ್ 31,2021ರ ಅನ್ವಯ ಗರಿಷ್ಟ 25 ಮತ್ತು 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ECIL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:
ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) ಜ್ಯೂನಿಯರ್ ಆರ್ಟಿಸನ್, ಸೈಂಟಿಫಿಕ್ ಅಸಿಸ್ಟೆಂಟ್ ಮತ್ತು ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ನಡೆಸಲಾಗುತ್ತಿದೆ. ಈ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ನೇರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ECIL ನೇಮಕಾತಿ 2021 ವೇತನ :
ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) ಜ್ಯೂನಿಯರ್ ಆರ್ಟಿಸನ್, ಸೈಂಟಿಫಿಕ್ ಅಸಿಸ್ಟೆಂಟ್ ಮತ್ತು ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಸಂದರ್ಶನ ನಡೆಸಲಾಗುತ್ತಿದೆ. ಈ ಸಂದರ್ಶನದ ಮೂಲಕ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/-ರೂ, ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,384/-ರೂ ಮತ್ತು ಜ್ಯೂನಿಯರ್ ಆರ್ಟಿಸನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,564/-ರೂ ವೇತನವನ್ನು ನೀಡಲಾಗುವುದು.
ECIL ನೇಮಕಾತಿ 2021 ಅರ್ಜಿ ಶುಲ್ಕ :
ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) ಜ್ಯೂನಿಯರ್ ಆರ್ಟಿಸನ್, ಸೈಂಟಿಫಿಕ್ ಅಸಿಸ್ಟೆಂಟ್ ಮತ್ತು ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಸಂದರ್ಶನ ನಡೆಸಲಾಗುತ್ತಿದೆ. ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ECIL ನೇಮಕಾತಿ 2021 ಸಂದರ್ಶನದ ವಿವರ:
ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) ಜ್ಯೂನಿಯರ್ ಆರ್ಟಿಸನ್, ಸೈಂಟಿಫಿಕ್ ಅಸಿಸ್ಟೆಂಟ್ ಮತ್ತು ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಸಂದರ್ಶನ ನಡೆಸಲಾಗುತ್ತಿದೆ. ಈ ಸಂದರ್ಶನದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.ecil.co.in/ ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಡಿಸೆಂಬರ್ 4,2021ರಂದು ಬೆಳಿಗ್ಗೆ 10:00 ಗಂಟೆಗೆ ಹತ್ತಿರದ ಕಚೇರಿಯಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











