ECIL Recruitment 2021 : 22 ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) ಇಪ್ಪತ್ತೆರಡು (22)ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಇಸಿಐಎಲ್ ನಲ್ಲಿ 22 ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದ ನವದೆಹಲಿಯಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ವಾಕ್ ಇನ್ ಇಂಟರ್ವ್ಯೂ ನಲ್ಲಿ ಭಾಗವಹಿಸಬಹುದಾಗಿದ್ದು, ಅಕ್ಟೋಬರ್ 6, 2021 ರಂದು ಬೆಳಿಗ್ಗೆ 10 ಗಂಟೆಯಿಂದ ಸಂದರ್ಶನ ನಡೆಯಲಿದೆ.

ECIL ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ECIL ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಇಸಿಐಎಲ್ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ಮತ್ತು ಇನ್ಸ್ಟ್ರುಮೆಂಟೇಶನ್‌ನಲ್ಲಿ ಕನಿಷ್ಠ 60% ರಷ್ಟು ಅಂಕಗಳೊಂದಿಗೆ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಇಸಿಐಎಲ್ ನೇಮಕಾತಿ ಅಧಿಸೂಚನೆ 2021 ರಲ್ಲಿ ವಿವರಿಸಿರುವಂತೆ ಎಲೆಕ್ಟ್ರಾನಿಕ್ ಸರ್ವೇಲೆನ್ಸ್ ಸಿಸ್ಟಮ್ಸ್/ಇನ್‌ಸ್ಟಾಲೇಶನ್, ಕಾರ್ಯಾಚರಣೆಗಳು ಮತ್ತು ಸಿಸಿಟಿವಿ ವ್ಯವಸ್ಥೆಗಳ ನಿರ್ವಹಣೆ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷಗಳ ಅನುಭವವನ್ನು ಹೊಂದಿರಬೇಕು.

ECIL ನೇಮಕಾತಿ 2021 ವಯೋಮಿತಿ :

ECIL ನೇಮಕಾತಿ 2021 ವಯೋಮಿತಿ :

ಇಸಿಐಎಲ್ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಗಸ್ಟ್ 31, 2021ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು. ಇಸಿಐಎಲ್ ನೇಮಕಾತಿ 2021 ಅಧಿಸೂಚನೆಯಲ್ಲಿ ನಮೂದಿಸಿರುವಂತೆ ಪರಿ‍ಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಓಬಿಸಿ/ಪಿಡಬ್ಲ್ಯೂಡಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ECIL ನೇಮಕಾತಿ 2021 ವೇತನ :

ECIL ನೇಮಕಾತಿ 2021 ವೇತನ :

ಇಸಿಐಎಲ್ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆ ೨೦೨೧ರಲ್ಲಿ ನಮೂದಿಸಿರುವಂತೆ ತಿಂಗಳಿಗೆ 23,000/-ರೂಗಳ ವೇತನವನ್ನು ನೀಡಲಾಗುವುದು.

ECIL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ECIL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಇಸಿಐಎಲ್ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅಧಿಸೂಚನೆಯಲ್ಲಿ ವಿವರಿಸಿರುವಂತೆ ಅಕ್ಟೋಬರ್ 6,2021 ರಂದು ಬೆಳಿಗ್ಗೆ 10 ಗಂಟೆಯಿಂದ ನಡೆಯುವ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ECIL ನೇಮಕಾತಿ 2021 ಅರ್ಜಿ ಶುಲ್ಕ :

ECIL ನೇಮಕಾತಿ 2021 ಅರ್ಜಿ ಶುಲ್ಕ :

ಇಸಿಐಎಲ್ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಲೇಖನದ ಕೊನೆಯಲ್ಲಿ ನೀಡಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ECIL ನೇಮಕಾತಿ 2021 ಸಂದರ್ಶನ :

ECIL ನೇಮಕಾತಿ 2021 ಸಂದರ್ಶನ :

ಇಸಿಐಎಲ್ ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುತ್ತಿರುವ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಕ್ಟೋಬರ್ 6,2021ರಂದು ಬೆಳಿಗ್ಗೆ 10 ಗಂಟೆಗೆ "ECIL Zonal Office, D-15, DDA Local Shopping Complex, A-Block, Ring Road, Naraina, New Delhi - 110028" ಕಚೇರಿಯಲ್ಲಿ ನಡೆಯುವ ಸಂದರ್ಶನಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ECIL recruitment 2021 notification has been released for 22 technical officer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+