ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನಲ್ಲಿ 190 ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 26, 28 ಮತ್ತು 29,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ECIL ನೇಮಕಾತಿ 2022 ವಿದ್ಯಾರ್ಹತೆ :
ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ECIL ನೇಮಕಾತಿ 2022 ವಯೋಮಿತಿ :
ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ECIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆ, ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ECIL ನೇಮಕಾತಿ 2022 ವೇತನ :
ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 31,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ECIL ನೇಮಕಾತಿ 2022 ಅರ್ಜಿ ಶುಲ್ಕ :
ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ECIL ನೇಮಕಾತಿ 2022 ಸಂದರ್ಶನ ವಿವರ :
ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.ecil.co.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 26, 28 ಮತ್ತು 29,2022ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ :
Factory Main Gate, Electronics Corporation of India Limited, ECIL Post, Hyderabad - 500062.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











