
ಎಜುಕೇಶನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ 2022ನೇ ಸಾಲಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 8 ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 20,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

EdCIL ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :
ಅಕಾಡೆಮಿಕ್ ಕನ್ಸಲ್ಟೆಂಟ್ : 4 ಹುದ್ದೆಗಳು
ಗ್ರಾಫಿಕ್ ಡಿಸೈನ್ ಕನ್ಸಲ್ಟೆಂಟ್ : 1 ಹುದ್ದೆ
ಪ್ರೊಡಕ್ಷನ್ ಕನ್ಸಲ್ಟೆಂಟ್ : 1 ಹುದ್ದೆ
ಟೆಕ್ನೀಷಿಯನ್ ಕನ್ಸಲ್ಟೆಂಟ್ : 2 ಹುದ್ದೆ
ಒಟ್ಟು 8 ಹುದ್ದೆಗಳು
EdCIL ನೇಮಕಾತಿ 2022 ವಿದ್ಯಾರ್ಹತೆ :
ಎಜುಕೇಶನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಹಾಕಲು ಇಚ್ಚಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಪಿಹೆಚ್‌ಡಿ, ಎಂ.ಡಿಇಎಸ್, ಎಂಎಫ್ಎ, ಪೋಸ್ಟ್ ಗ್ರಾಜುಯೇಶನ್, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
EdCIL ನೇಮಕಾತಿ 2022 ವಯೋಮಿತಿ :
ಎಜುಕೇಶನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾರ್ಚ್ 1,2022ರ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
EdCIL ನೇಮಕಾತಿ 2022 ವೇತನ :
ಎಜುಕೇಶನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000/-ರೂ ವೇತನವನ್ನು ನೀಡಲಾಗುವುದು.
EdCIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಎಜುಕೇಶನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗುಂಪು ಚರ್ಚೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
EdCIL ನೇಮಕಾತಿ 2022 ಅರ್ಜಿ ಶುಲ್ಕ :
ಎಜುಕೇಶನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
EdCIL ನೇಮಕಾತಿ 2022 ಅರ್ಜಿ ಸಲ್ಲಿಕೆ :
ಎಜುಕೇಶನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.edcilindia.co.in/ ಗೆ ಭೇಟಿ ನೀಡಿ. ನಂತರ ನೇಮಕಾತಿ ಅಧಿಸೂಚನೆಯನ್ನು ಓದಿ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 4,2022 ರಿಂದ ಏಪ್ರಿಲ್ 20,2022ರೊಳಗೆ [email protected] ವಿಳಾಸಕ್ಕೆ ಅರ್ಜಿಯನ್ನು ತಲುಪಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











