ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್ಎಲ್)ನಲ್ಲಿ 235 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳೀಗೆ ಅರ್ಜಿ ಸಲ್ಲಿಸಲು ನವೆಂಬರ್ 30,2019 ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
CRITERIA | DETAILS |
Name Of The Posts | ಡೆಪ್ಯುಟಿ ಮ್ಯಾನೇಜರ್,ಅಸಿಸ್ಟೆಂಟ್ ಮ್ಯಾನೇಜರ್,ಇಂಜಿನಿಯರ್,ಅಸಿಸ್ಟೆಂಟ್ ಇಂಜಿನಿಯರ್,ಟೆಕ್ನೀಶಿಯನ್,ಆಫೀಸರ್,ಅಸಿಸ್ಟೆಂಟ್ ಆಫೀಸರ್,ಇಂಜಿನಿಯರ್,ಡಾಟಾ ಎಂಟ್ರಿ ಆಪರೇಟರ್ |
Organisation | ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್ಎಲ್) |
Educational Qualification | ಬಿ.ಇ ಪದವಿ/ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ,ಐಟಿಐ,ಸಿಎ/ಐಸಿಡಬ್ಲ್ಯೂಎ/ಎಂಬಿಎ,ಎಂ.ಕಾಂ,ಬಿ.ಕಾಂ,ಪದವಿ,ಎಲ್‌ಎಲ್‌ಬಿ,ಸ್ನಾತಕೋತ್ತೆರ ಪದವಿ,ಬಿ.ಟೆಕ್ ಮತ್ತು ದ್ವಿತೀಯ ಪಿಯುಸಿ/10+2 |
Job Location | ಭಾರತದೆಲ್ಲೆಡೆ |
Salary Scale | ಹುದ್ದೆಗಳಿಗನುಸಾರ 20,500/- ರಿಂದ 2,00,000/-ರೂಗಳು |
Application Start Date | November 1, 2019 |
Application End Date | November 30, 2019 |
ವಿದ್ಯಾರ್ಹತೆ:
ಬಿ.ಇ ಪದವಿ/ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ, ಐಟಿಐ,ಸಿಎ/ಐಸಿಡಬ್ಲ್ಯೂಎ/ಎಂಬಿಎ, ಎಂ.ಕಾಂ, ಬಿ.ಕಾಂ,ಪದವಿ, ಎಲ್‌ಎಲ್‌ಬಿ, ಸ್ನಾತಕೋತ್ತೆರ ಪದವಿ, ಬಿ.ಟೆಕ್ ಮತ್ತು ದ್ವಿತೀಯ ಪಿಯುಸಿ/10+2 ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 27,30 ಮತ್ತು 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನದ ವಿವರ:
ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 20,500/- ರಿಂದ 2,00,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 1000/-ರೂ ಮತ್ತು ಮೀಸಲಾತಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್ಎಲ್)ನ ಅಧಿಕೃತ ವೆಬ್‌ಸೈಟ್ https://www.eeslindia.org/content/raj/eesl/en/home.html ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 30,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.