ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ 2019: 34 ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್‌) ನೇಮಕಾತಿ 34 ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ ನಲ್ಲಿ ಜುಲೈ 4,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್  ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಎಕ್ಸಿಕ್ಯುಟಿವ್
Organisation ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್‌)
Educational Qualification ಬಿ.ಇ /ಬಿ.ಟೆಕ್ / ಬಿ.ಎಸ್ಸಿ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ತಿಂಗಳಿಗೆ 80,000/- ರಿಂದ 1,15,200 /-ರೂ
Application Start Date June 14, 2019
Application End Date July 4, 2019

ಶೈಕ್ಷಣಿಕ ವಿದ್ಯಾರ್ಹತೆ:

ಬಿ.ಇ /ಬಿ.ಟೆಕ್ / ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 37, 45 ಮತ್ತು 48 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 80,000/- ರಿಂದ 1,15,200 /-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಮಾಡಲಾಗುವುದು ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://engineersindia.com/ ಗೆ ಹೋಗಿ ಕೇಳಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 4,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
EIL Recruitment 2019-20:Apply Online for 34 Executive Vacancies. Engineers India Limited (EIL) invited Online applications from eligible and interested candidates to fill up Executive Posts through EIL official notification 2019. Job seekers who are looking for a career in All India Government can make use of this opportunity.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+