ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ 3 ಚೀಫ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 13,2022 ರಿಂದ ಮೇ 3,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

EIL ನೇಮಕಾತಿ 2022 ವಿದ್ಯಾರ್ಹತೆ :
ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಚೀಫ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಬಿ.ಎಸ್ಸಿ/ಬಿ.ಇ/ಬಿ.ಟೆಕ್/ ಇಂಜಿನಿಯರಿಂಗ್ ಪದವೀಧರ ಮತ್ತು ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

EIL ನೇಮಕಾತಿ 2022 ವಯೋಮಿತಿ :
ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಚೀಫ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಮಾರ್ಚ್ 31,2022ರ ಅನ್ವಯ ಹುದ್ದೆಗಳಿಗನುಸಾರ ಕನಿಷ್ಟ 19 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

EIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಚೀಫ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

EIL ನೇಮಕಾತಿ 2022 ವೇತನ :
ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಚೀಫ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,20,000/- ರಿಂದ 2,80,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

EIL ನೇಮಕಾತಿ 2022 ಅರ್ಜಿ ಶುಲ್ಕ :
ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಚೀಫ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

EIL ನೇಮಕಾತಿ 2022 ಅರ್ಜಿ ಸಲ್ಲಿಕೆ:
ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಚೀಫ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://engineersindia.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 13,2022 ರಿಂದ ಮೇ 3,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











