ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ 54 ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಡಿ.ಎಡ್, ಗ್ರಾಜುಯೇಟ್, ಪದವಿ ಮತ್ತು ಬಿ.ಎಸ್ಸಿ / ಡಿಪ್ಲೋಮಾ ಇನ್ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ :
ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.
ಅರ್ಜಿ ಶುಲ್ಕ :
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ :
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ :
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ [email protected] ಮತ್ತು [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿಯ ವಿಳಾಸ :
ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಇಎಂಪಿಆರ್‌ಐ),
"ಹಸಿರು ಭವನ" ದೊರೆಸಾನಿಪಾಳ್ಯ ಅರಣ್ಯ ಆವರಣ, ವಿನಾಯಕನಗರ ವೃತ್ತ,
ಜೆ. ಪಿ. ನಗರ 5 ನೇ ಹಂತ, ಬೆಂಗಳೂರು - 560078.
ಪ್ರಮುಖ ದಿನಾಂಕಗಳು :
ಪ್ರಾಜೆಕ್ಟ್ ಅಸಿಸ್ಟೆಂಟ್ (ಡಿಎಸ್‌ಟಿ ಪ್ರಾಜೆಕ್ಟ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - ಸೆಪ್ಟೆಂಬರ್ 13,2019
ಇನ್ನುಳಿದ ಹುದ್ದೆಗಳಿಗೆ ಈ ಅಧಿಸೂಚನೆಯನ್ನು ಹೊರಡಿಸಿದ ನಂತರದ 15 ದಿನದೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.
ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ (ಡಿಎಸ್‌ಟಿ ಪ್ರಾಜೆಕ್ಟ್) ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











