ರಾಜ್ಯ ನೌಕರರ ವಿಮಾ ನಿಗಮವು ಸೀನಿಯರ್ ರೆಸಿಡೆಂಟ್ ಸ್ಕೀಮ್‌ನ ಅಡಿಯಲ್ಲಿ 28 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಸೆಪ್ಟೆಂಬರ್ 3 ಮತ್ತು 4,2019 ರಂದು ನಡೆಯುವ ವಾಕ್-ಇನ್ ಇಂಟರ್‌ವ್ಯೂ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
CRITERIA | DETAILS |
Name Of The Posts | ಸೀನಿಯರ್ ರೆಸಿಡೆಂಟ್ |
Organisation | ರಾಜ್ಯ ನೌಕರರ ವಿಮಾ ನಿಗಮ ( ಇಎಸ್‌ಐಸಿ ಕರ್ನಾಟಕ) |
Educational Qualification | ಪೋಸ್ಟ್ ಗ್ರಾಜುಯೇಟ್ ಪದವಿ |
Job Location | ಬೆಂಗಳೂರು (ಕರ್ನಾಟಕ) |
Salary Scale | ತಿಂಗಳಿಗೆ 67,700/-ರೂ |
Application Start Date | August 27, 2019 |
Application End Date | September 3, 2019 |
ವಿದ್ಯಾರ್ಹತೆ:
ಪೋಸ್ಟ್ ಗ್ರಾಜುಯೇಟ್ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ:
ಸೆಪ್ಟೆಂಬರ್ 3,2019ರ ಅನ್ವಯ ಗರಿಷ್ಠ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ , ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನದ ವಿವರ:
ಸೀನಿಯರ್ ರೆಡಿಸೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,700/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ವಾಕ್-ಇನ್ ಇಂಟರ್‌ವ್ಯೂ ನಡೆಸಲಾಗುತ್ತಿದ್ದು, ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.
ವಾಕ್ -ಇನ್ ಇಂಟರ್ವ್ಯೂ:
ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್ https://www.esic.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 3 ಮತ್ತು 4 ರಂದು ನಡೆಯುವ ವಾಕ್-ಇನ್ ಇಂಟರ್‌ವ್ಯೂ ನಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ:
ಇಎಸ್‌ಐಸಿ ವೈದ್ಯಕೀಯ ಕಾಲೇಜು,
ಹೊಸ ಶೈಕ್ಷಣಿಕ ಕಟ್ಟಡ ರಾಜಾಜಿನಗರ,
ಬೆಂಗಳೂರು-560010
ಅಭ್ಯರ್ಥಿಗಳು ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ
ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.