ರಾಜ್ಯ ನೌಕರರ ವಿಮಾ ನಿಗಮ 41 ಜ್ಯೂನಿಯರ್ ರೆಸಿಡೆಂಡ್ ಮತ್ತು ಟ್ಯೂಟರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಜೂನ್ 6 ಮತ್ತು 7,2019 ರಂದು ನಡೆಯುವ ವಾಕ್-ಇನ್ ಇಂಟರ್‌ವ್ಯೂ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು.

| CRITERIA | DETAILS |
| Name Of The Posts | ಜ್ಯೂನಿಯರ್ ರೆಸಿಡೆಂಟ್ ಮತ್ತು ಟ್ಯೂಟರ್ |
| Organisation | ರಾಜ್ಯ ನೌಕರರ ವಿಮಾ ನಿಗಮ ( ಇಎಸ್‌ಐಸಿ ಕರ್ನಾಟಕ) |
| Educational Qualification | ಎಂಬಿಬಿಎಸ್ ಪದವಿ |
| Job Location | ಕಲಬುರಗಿ (ಕರ್ನಾಟಕ) |
| Salary Scale | ತಿಂಗಳಿಗೆ 76,000/-ರೂ |
| Application Start Date | May 30, 2019 |
| Application End Date | June 6, 2019 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಎಂಬಿಬಿಎಸ್ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 76,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ವಾಕ್-ಇನ್ ಇಂಟರ್‌ವ್ಯೂ ಮಾಡಲಾಗುತ್ತಿದ್ದು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ
ವಾಕ್ -ಇನ್ ಇಂಟರ್ವ್ಯೂ:
ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್ https://www.esic.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಜೂನ್ 6 ಮತ್ತು 7 ರಂದು ನಡೆಯುವ ವಾಕ್-ಇನ್ ಇಂಟರ್‌ವ್ಯೂ ನಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ:
ರಾಜ್ಯ ನೌಕರರ ವಿಮಾ ನಿಗಮ, ಇಎಸ್‌ಐಸಿ ಮೆಡಿಕಲ್ ಕಾಲೇಜು ಮತ್ತು ಆಸ್ಟತ್ರೆ,
ಗುಲ್ಬರ್ಗಾ,
ಕರ್ನಾಟಕ.
ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ


Click it and Unblock the Notifications











