ಇಎಸ್‌ಐಸಿ ನೇಮಕಾತಿ 9 ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜ್ಯ ನೌಕರರ ವಿಮಾ ನಿಗಮ 9 ಟ್ಯೂಟರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಜುಲೈ 11,2019 ರಂದು ನಡೆಯುವ ವಾಕ್‌-ಇನ್ ಇಂಟರ್‌ವ್ಯೂ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಎಸ್‌ಐಸಿಯಲ್ಲಿ ಉದ್ಯೋಗಾವಕಾಶ ಜುಲೈ 11ಕ್ಕೆ ವಾಕ್-ಇನ್ ಇಂಟರ್ವ್ಯೂ

CRITERIA DETAILS
Name Of The Posts ಟ್ಯೂಟರ್
Organisation ರಾಜ್ಯ ನೌಕರರ ವಿಮಾ ನಿಗಮ ( ಇಎಸ್‌ಐಸಿ ಕರ್ನಾಟಕ)
Educational Qualification ಹುದ್ದೆಗಳಿಗನುಸಾರ ವಿದ್ಯಾರ್ಹತೆ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 85,000/-ರೂ
Application Start Date July 4, 2019
Application End Date July 11, 2019

ವಿದ್ಯಾರ್ಹತೆ:

ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ ೩3 ವರ್ಷ ಮತ್ತು ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 85,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ವಾಕ್‌-ಇನ್ ಇಂಟರ್‌ವ್ಯೂ ನಡೆಸಲಾಗುತ್ತಿದ್ದು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ವಾಕ್ -ಇನ್ ಇಂಟರ್ವ್ಯೂ:

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್‌ https://www.esic.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಜುಲೈ 11 ರಂದು ನಡೆಯುವ ವಾಕ್‌-ಇನ್‌ ಇಂಟರ್‌ವ್ಯೂ ನಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
ಡೀನ್ ಆಫೀಸ್,
ಇಎಸ್‌ಐಸಿ ಅಕಾಡೆಮಿಕ್ ಬ್ಲಾಕ್,
ಇಎಸ್‌ಐಸಿ ಮೆಡಿಕಲ್ ಕಾಲೇಜು ಮತ್ತು ಪಿಜಿಐಎಂಎಸ್‌ಆರ್‌ ರಾಜಾಜಿನಗರ,
ಬೆಂಗಳೂರು-560010

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
ESIC Bangalore Recruitment 2019-20: Walk-in-Interview for 9 Tutor vacancies. Employees’ State Insurance Corporation (ESIC Bangalore) invited eligible and interested candidates to attend the walk-in-interview to fill up Tutor Posts through ESIC Bangalore official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X