ರಾಜ್ಯ ನೌಕರರ ವಿಮಾ ನಿಗಮ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಗುಲ್ಬರ್ಗಾದಲ್ಲಿ 39 ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 23,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವಯೋಮಿತಿ:
ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಗರಿಷ್ಟ 69 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವೇತನ:
ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1,06,000/-ರೂ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 92,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಈ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.
ಸಂದರ್ಶನದ ವಿವರ:
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: ಅಕ್ಟೋಬರ್ 23,2020ರ ಬೆಳಿಗ್ಗೆ 9 ಗಂಟೆಗೆ
ಸಂದರ್ಶನ ನಡೆಯುವ ಸ್ಥಳ:
ESIC Medical College And Hospital,
Gulbarga,
Karnataka
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











