ESIC Karnataka Recruitment 2020: ರಿಸರ್ಚ್ ಸೈಂಟಿಸ್ಟ್ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ರಾಜ್ಯ ನೌಕರರ ವಿಮಾ ನಿಗಮವು ರಿಸರ್ಚ್ ಸೈಂಟಿಸ್ಟ್ ಮತ್ತು ಸೀನಿಯರ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 23,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಎಸ್‌ಐಸಿಯಲ್ಲಿ ಉದ್ಯೋಗಾವಕಾಶ: ಅ.23ಕ್ಕೆ ನೇರ ಸಂದರ್ಶನ

 

ವಿದ್ಯಾರ್ಹತೆ:

ರಿಸರ್ಚ್ ಸೈಂಟಿಸ್ಟ್ ಮತ್ತು ಸೀನಿಯರ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ಎಂ.ಡಿ, ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ಸೀನಿಯರ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳಿಗೆ ಗರಿಷ್ಟ 45 ವರ್ಷ ಮತ್ತು ರಿಸರ್ಚ್ ಸೈಂಟಿಸ್ಟ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಸೀನಿಯರ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1,25,000/-ರೂ ಮತ್ತು ರಿಸರ್ಚ್ ಸೈಂಟಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,00,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: ಅಕ್ಟೋಬರ್ 23,2020ರ ಬೆಳಿಗ್ಗೆ 11:30ಕ್ಕೆ

ಸಂದರ್ಶನ ನಡೆಯುವ ಸ್ಥಳ:

ESIC Medical College And Hospital,

Gulbarga,

Karnataka

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
ESIC Karnataka recruitment 2020 notification has been released for 2 sr research scientist and research scientist posts. Interested candidates can attend walk in interview on October 23.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X