ರಾಜ್ಯ ನೌಕರರ ವಿಮಾ ನಿಗಮ ಕರ್ನಾಟಕ (ಇಎಸ್ಐಸಿ ಕರ್ನಾಟಕ) 5 ಸೀನಿಯರ್ ರೆಸಿಡೆಂಟ್ ಮತ್ತು ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಫೆಬ್ರವರಿ 16,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:
ಎಂಬಿಬಿಎಸ್, ಪಿಜಿ ಪದವಿ/ಡಿಪ್ಲೋಮಾ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ:
ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರೂಗಳ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸಂದರ್ಶನದ ವಿವರ:
ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಫೆಬ್ರವರಿ 16,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಕಚೇರಿ ವಿಳಾಸ:
Office of medical superintendent,
ESIC hospital,
peenya,
bengaluru.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











