ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ನಿಗಮವು ಅರೆಕಾಲಿಕ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 10,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ESIC Karnataka ನೇಮಕಾತಿ 2022 ವಿದ್ಯಾರ್ಹತೆ :
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅರೆಕಾಲಿಕ ಬೋಧಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ESIC Karnataka ನೇಮಕಾತಿ 2022 ವಯೋಮಿತಿ :
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅರೆಕಾಲಿಕ ಬೋಧಕ ಹುದ್ದೆಗಳಿಗೆ ಅಕ್ಟೋಬರ್ 10,2022ರ ಅನ್ವಯ ಗರಿಷ್ಟ 67 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ESIC Karnataka ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅರೆಕಾಲಿಕ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅನುಭವ ಮತ್ತು ಅರ್ಹತೆಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ESIC Karnataka ನೇಮಕಾತಿ 2022 ವೇತನ :
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅರೆಕಾಲಿಕ ಬೋಧಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗಂಟೆಗೆ 400/-ರೂ ಹಣವನ್ನು ಪಾವತಿಸಲಾಗುವುದು.
ESIC Karnataka ನೇಮಕಾತಿ 2022 ಅರ್ಜಿ ಶುಲ್ಕ :
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅರೆಕಾಲಿಕ ಬೋಧಕ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ESIC Karnataka ನೇಮಕಾತಿ 2022 ಸಂದರ್ಶನ ವಿವರ :
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅರೆಕಾಲಿಕ ಬೋಧಕ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.esic.nic.in/recruitments ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಅಕ್ಟೋಬರ್ 10,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ :
Academic Block, ESIC Medical College, PGIMSR & Model Hospital, Rajajinagar, Bengaluru - 560010, Karnataka
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











