ESIC Karnataka Recruitment 2022 : ಪ್ರಾಧ್ಯಾಪಕ ಹುದ್ದೆಗಳಿಗೆ ನ.4ರಂದು ವಾಕ್ ಇನ್ ಇಂಟರ್ವ್ಯೂ

ಕಾರ್ಮಿಕರ ರಾಜ್ಯ ವಿಮಾ ನಿಗಮ, ಕರ್ನಾಟಕದಲ್ಲಿ 9 ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 4,2022 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಎಸ್‌ಐಸಿ ಕರ್ನಾಟಕದಲ್ಲಿ ಉದ್ಯೋಗಾವಕಾಶ

ESIC ನೇಮಕಾತಿ 2022 ವಿದ್ಯಾರ್ಹತೆ :

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಡೆಂಟಲ್ ಸರ್ಜರಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ESIC ನೇಮಕಾತಿ 2022 ವಯೋಮಿತಿ :

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನವೆಂಬರ್ 4,2022ರ ಅನ್ವಯ ಗರಿಷ್ಟ 63 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ESIC ನೇಮಕಾತಿ 2022 ವೇತನ :

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,23,485/- ರಿಂದ 2,16,144/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ESIC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ESIC ನೇಮಕಾತಿ 2022 ಅರ್ಜಿ ಶುಲ್ಕ :

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ ಮತ್ತು ಇಎಸ್‌ಐಸಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ESIC ನೇಮಕಾತಿ 2022 ಸಂದರ್ಶನ :

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.esic.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 4,2022ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ :
ESIC Dental College, Kalaburagi, Karnataka.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
ESIC karnataka recruitment 2022 recruitment notification has been released for professor posts. Interested candidates can attend walk in interview on November 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X