ESIC Recruitment 2019: 10 ಟ್ಯೂಟರ್ ಹುದ್ದೆಗಳ ನೇಮಕಾತಿ

ರಾಜ್ಯ ನೌಕರರ ವಿಮಾ ನಿಗಮವು 10 ಟ್ಯೂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅರ್ಹ ಅಭ್ಯರ್ಥಿಗಳು ನವೆಂಬರ್ 21,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಎಸ್‌ಐಸಿಯಲ್ಲಿ 10 ಹುದ್ದೆಗಳಿಗೆ ಅರ್ಜಿ ಆಹ್ವಾನ...ನ.21ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಟ್ಯೂಟರ್
Organisation ರಾಜ್ಯ ನೌಕರರ ವಿಮಾ ನಿಗಮ ( ಇಎಸ್‌ಐಸಿ ಬೆಂಗಳೂರು)
Educational Qualification ಬಿ.ಎಸ್ಸಿ ಅಥವಾ ಎಂ.ಎಸ್ಸಿ ನರ್ಸಿಂಗ್
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 45,000/-ರೂ
Application Start Date November 14, 2019
Application End Date November 21, 2019

ವಿದ್ಯಾರ್ಹತೆ:

ಎಂ.ಎಸ್ಸಿ ಅಥವಾ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ನವೆಂಬರ್ 21,2019ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಟ್ಯೂಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್‌ https://www.esic.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕಚೇರಿಯ ವಿಳಾಸಕ್ಕೆ ನವೆಂಬರ್ 21,2019ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಸಂದರ್ಶನ ನಡೆಯುವ ದಿನಾಂಕ: ನವೆಂಬರ್ 25 ಮತ್ತು 26,2019ರ ಬೆಳಿಗ್ಗೆ 10 ಗಂಟೆಗೆ

ಸಂದರ್ಶನ ನಡೆಯುವ ಸ್ಥಳ:
ಇಎಸ್‌ಐಸಿ ನರ್ಸಿಂಗ್ ಕಾಲೇಜು,
ಇಂದಿರಾನಗರ,
ಬೆಂಗಳೂರು-560008.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
ESIC recruitment 2019 notification has been released on official website for the recruitment of 10 tutor posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X