ರಾಜ್ಯ ನೌಕರರ ವಿಮಾ ನಿಗಮವು 9 ಜ್ಯೂನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅರ್ಹ ಅಭ್ಯರ್ಥಿಗಳು ನವೆಂಬರ್ 28,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಜ್ಯೂನಿಯರ್ ರೆಸಿಡೆಂಟ್ |
| Organisation | ರಾಜ್ಯ ನೌಕರರ ವಿಮಾ ನಿಗಮ |
| Educational Qualification | ಎಂಬಿಬಿಎಸ್ |
| Job Location | ಬೆಂಗಳೂರು (ಕರ್ನಾಟಕ) |
| Salary Scale | ತಿಂಗಳಿಗೆ 85,000/-ರೂ |
| Application Start Date | November 21, 2019 |
| Application End Date | November 28, 2019 |
ವಿದ್ಯಾರ್ಹತೆ:
ಜ್ಯೂನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಗರಿಷ್ಟ 3೦ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 85,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಸಂದರ್ಶನದ ವಿವರ:
ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ರಾಜ್ಯ ನೌಕರರ ವಿಮಾ ನಿಗಮದ ಅಧಿಕೃತ ವೆಬ್‌ಸೈಟ್ https://www.esic.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 28,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: ನವೆಂಬರ್ 28,2019ರಂದು ಬೆಳಗ್ಗೆ 9:30ಕ್ಕೆ
ಸಂದರ್ಶನ ನಡೆಯುವ ಸ್ಥಳ:
ಪಿಜಿಐಎಂಎಸ್ಆರ್ ಮತ್ತು ಮಾಡೆಲ್ ಆಸ್ಪತ್ರೆ,
ರಾಜಾಜಿನಗರ,
ಬೆಂಗಳೂರು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











