ESIC Recruitment 2019 : 4 ಸೀನಿಯರ್ ರೆಸಿಡೆಂಟ್ ಹುದ್ದೆಗಳ ನೇಮಕಾತಿ

ರಾಜ್ಯ ನೌಕರರ ವಿಮಾ ನಿಗಮವು 4 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ನವೆಂಬರ್ 5,2019 ರಂದು ನಡೆಯುವ ವಾಕ್‌-ಇನ್ ಇಂಟರ್‌ವ್ಯೂ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಎಸ್‌ಐಸಿಯಲ್ಲಿ ಉದ್ಯೋಗಾವಕಾಶ : ನ.5ಕ್ಕೆ ನೇರ ಸಂದರ್ಶನ

CRITERIA DETAILS
Name Of The Posts ಸೀನಿಯರ್ ರೆಸಿಡೆಂಟ್
Organisation ರಾಜ್ಯ ನೌಕರರ ವಿಮಾ ನಿಗಮ ( ಇಎಸ್‌ಐಸಿ ಕರ್ನಾಟಕ)
Educational Qualification ಎಂಬಿಬಿಎಸ್,ಪೋಸ್ಟ್ ಗ್ರಾಜುಯೇಟ್ ಪದವಿ/ಡಿಪ್ಲೋಮಾ
Job Location ಬೆಂಗಳೂರು (ಕರ್ನಾಟಕ)
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date October 16, 2019
Application End Date November 5, 2019

ವಿದ್ಯಾರ್ಹತೆ:

ಎಂಬಿಬಿಎಸ್,ಪೋಸ್ಟ್ ಗ್ರಾಜುಯೇಟ್ ಪದವಿ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ನವೆಂಬರ್ 5,2019ರ ಅನ್ವಯ ಗರಿಷ್ಟ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಹರು.

ವೇತನದ ವಿವರ:

ಸೀನಿಯರ್ ರೆಡಿಸೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ವಾಕ್‌-ಇನ್ ಇಂಟರ್‌ವ್ಯೂ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್‌ https://www.esic.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 5ರಂದು ನಡೆಯುವ ನೇರ-ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
ಇಎಸ್‌ಐಸಿ ವೈದ್ಯಕೀಯ ಕಾಲೇಜು,
ಹೊಸ ಶೈಕ್ಷಣಿಕ ಕಟ್ಟಡ ರಾಜಾಜಿನಗರ,
ಬೆಂಗಳೂರು-560010

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
ESIC 2019 going to condutc walk-in-interview for 4 seniior resident posts. Interested candidates can attend.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X