ESIC Recruitment 2021 : 3865 ಯುಡಿಸಿ, ಎಂಟಿಸ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿ ಅಧಿಸೂಚನೆ 2021-2022 ಅನ್ನು ಬಿಡುಗಡೆ ಮಾಡಿದೆ. ನಿಗಮವು ಒಟ್ಟು 3865 ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಮತ್ತು ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು. ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಜನವರಿ 15, 2022 ರಿಂದ ಪ್ರಾರಂಭವಾಗಿ ಫೆಬ್ರವರಿ 15, 2022 ರಂದು ಕೊನೆಗೊಳ್ಳಲಿದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ರಾಜ್ಯ ನೌಕರರ ವಿಮಾ ನಿಗಮದಲ್ಲಿ 3865 ಹುದ್ದೆಗಳ ನೇಮಕಾತಿ

ESIC ನೇಮಕಾತಿ 2021 ವಿದ್ಯಾರ್ಹತೆ:

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ, ಮೆಟ್ರಿಕ್ಯುಲೇಶನ್ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ESIC ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:

ಅಪ್ಪರ್ ಡಿವಿಷನ್ ಕ್ಲರ್ಕ್ - 1736 ಹುದ್ದೆಗಳು
ಮಲ್ಟಿ ಟಾಸ್ಕಿಂಗ್ ಸ್ಟಾಫ್ - 1964 ಹುದ್ದೆಗಳು
ಶೀಘ್ರಲಿಪಿಗಾರ - 165 ಹುದ್ದೆಗಳು
ಒಟ್ಟು 3865 ಹುದ್ದೆಗಳು

ESIC ನೇಮಕಾತಿ 2021 ವಯೋಮಿತಿ :

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಫೆಬ್ರವರಿ 15,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ESIC ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ESIC ನೇಮಕಾತಿ 2021 ವೇತನ :

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 56,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ESIC ನೇಮಕಾತಿ 2021 ಅರ್ಜಿ ಶುಲ್ಕ :

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಇಲಾಖೆಯ ಅಭ್ಯರ್ಥಿಗಳು, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ESIC ನೇಮಕಾತಿ 2021 ಅರ್ಜಿ ಸಲ್ಲಿಕೆ :

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.esic.nic.in/recruitments ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 15, 2022 ರಿಂದ ಫೆಬ್ರವರಿ 15,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ESIC recruitment 2021 notification has been released for 3865 UDC, MTS and stenographer posts. Interested candidates can apply before February 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+