ESIC Recruitment 2021 : 1,120 ವಿಮಾ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ದಲ್ಲಿ 1,120 ವಿಮಾ ವೈದ್ಯಕೀಯ ಅಧಿಕಾರಿ ಗ್ರೇಡ್ II ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ನೌಕರರ ವಿಮಾ ನಿಗಮದಲ್ಲಿ ವಿಮಾ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 31,2021 ರಿಂದ ಜನವರಿ 31,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

 ESIC ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ESIC ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ವಿಮಾ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಎಂಬಿಬಿಎಸ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ESIC ನೇಮಕಾತಿ 2021 ವಯೋಮಿತಿ :

ESIC ನೇಮಕಾತಿ 2021 ವಯೋಮಿತಿ :

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ವಿಮಾ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜನವರಿ 31,2022ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಓಬಿಸಿ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ESIC ನೇಮಕಾತಿ 2021 ವೇತನ :

ESIC ನೇಮಕಾತಿ 2021 ವೇತನ :

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ವಿಮಾ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,77,500/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

ESIC ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ESIC ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ವಿಮಾ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ESIC ನೇಮಕಾತಿ 2021 ಅರ್ಜಿ ಶುಲ್ಕ :

ESIC ನೇಮಕಾತಿ 2021 ಅರ್ಜಿ ಶುಲ್ಕ :

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ವಿಮಾ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿ‍ಶಿಷ್ಟ ಪಂಗಡ/ಅಂಗವಿಕಲ/ಮಹಿಳೆ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ESIC ನೇಮಕಾತಿ 2021 ಅರ್ಜಿ ಸಲ್ಲಿಕೆ :

ESIC ನೇಮಕಾತಿ 2021 ಅರ್ಜಿ ಸಲ್ಲಿಕೆ :

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ವಿಮಾ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.esic.nic.in/recruitments ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 31,2021 ರಿಂದ ಜನವರಿ 31,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ESIC recruitment 2021 notification has been released for 1,120 insurance medical officer posts. Interested candidates can apply before January 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+