ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ 4 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 17,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ:
ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್ಐಸಿ) ನೇಮಕಾತಿಯ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಪಿಜಿ ಡಿಪ್ಲೋಮಾ/ಡಿಎನ್ಬಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್ಐಸಿ) ನೇಮಕಾತಿಯ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಡಿಸೆಂಬರ್ 17,2021ರ ಅನ್ವಯ ಗರಿಷ್ಟ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್ಐಸಿ) ನೇಮಕಾತಿಯ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,700/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್ಐಸಿ) ನೇಮಕಾತಿಯ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಅರ್ಜಿ ಶುಲ್ಕ:
ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್ಐಸಿ) ನೇಮಕಾತಿಯ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ನಡೆಸಲಾಗುತ್ತಿರುವ ಸಂದರ್ಶನಕ್ಕೆ ಹಾಜರಾಗಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಸಂದರ್ಶನದ ವಿವರ:
ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್ಐಸಿ) ನೇಮಕಾತಿಯ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ನಂತರ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಡಿಸೆಂಬರ್ 17,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ