
ಕಾರ್ಮಿಕರ ರಾಜ್ಯ ವಿಮಾ ನಿಗಮವು 4 ಕಾಂಟ್ರಾಕ್ಚುಯಲ್ ಸ್ಪೆಷಲಿಸ್ಟ್ ಮತ್ತು 4 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್ 2,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
ವಿದ್ಯಾರ್ಹತೆ:
ಪಿಜಿ ಪದವಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವಯೋಮಿತಿ:
ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸಂದರ್ಶನದ ವಿವರ:
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ದಿನಾಂಕ: ಜೂನ್ 2,2021
ಅಧಿಕೃತ ವೆಬ್‌ಸೈಟ್: https://www.esic.nic.in
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











