ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ನಿಗಮವು 55 ಸ್ಪೆಷಲಿಸ್ಟ್ ಗ್ರೇಡ್ II ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು. ಭಾರತದಲ್ಲಿ ವಿವಿಧೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಏ.20 ಕೊನೆಯ ದಿನವಾಗಿರುತ್ತದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ESIC ನೇಮಕಾತಿ 2022 ವಿದ್ಯಾರ್ಹತೆ:
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸ್ಪೆಷಲಿಸ್ಟ್ ಗ್ರೇಡ್ II ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ESIC ನೇಮಕಾತಿ 2022 ವಯೋಮಿತಿ :
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸ್ಪೆಷಲಿಸ್ಟ್ ಗ್ರೇಡ್ II ಹುದ್ದೆಗಳಿಗೆ ಏಪ್ರಿಲ್ 20,2022ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ESIC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸ್ಪೆಷಲಿಸ್ಟ್ ಗ್ರೇಡ್ II ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಭಾಷಾ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ESIC ನೇಮಕಾತಿ 2022 ವೇತನ :
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸ್ಪೆಷಲಿಸ್ಟ್ ಗ್ರೇಡ್ II ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,700/- ರಿಂದ 78,800/-ರೂ ವರೆಗೆ ವೇತನವನ್ನು ನೀಡಲಾಗುವುದು.
ESIC ನೇಮಕಾತಿ 2022 ಅರ್ಜಿ ಶುಲ್ಕ :
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸ್ಪೆಷಲಿಸ್ಟ್ ಗ್ರೇಡ್ II ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ/ಚೆಕ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
ESIC ನೇಮಕಾತಿ 2022 ಅರ್ಜಿ ಸಲ್ಲಿಕೆ :
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸ್ಪೆಷಲಿಸ್ಟ್ ಗ್ರೇಡ್ II ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.esic.nic.in/recruitments ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ ನಂತರ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಮಾರ್ಚ್ 16,2022 ರಿಂದ ಏಪ್ರಿಲ್ 20,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.