ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ ಲಿಮಿಟೆಡ್ (ಎಫ್‌ಎಸಿಟಿ) ನೇಮಕಾತಿ 274 ಮ್ಯಾನೇಜರ್ , ಅಧಿಕಾರಿ , ಟೆಕ್ನೀಶಿಯನ್ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಎಫ್‌ಎಸಿಟಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 20.2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

| CRITERIA | DETAILS |
| Name Of The Posts | ಮ್ಯಾನೇಜರ್ , ಅಧಿಕಾರಿ , ಟೆಕ್ನೀಶಿಯನ್ ಮತ್ತು ಇತರೆ ಹುದ್ದೆಗಳು |
| Organisation | ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ ಲಿಮಿಟೆಡ್ (ಎಫ್‌ಎಸಿಟಿ) |
| Educational Qualification | ಪದವಿ |
| Job Location | ಭಾರತದೆಲ್ಲೆಡೆ |
| Salary Scale | ಅಧಿಸೂಚನೆಯಲ್ಲಿ ತಿಳಿಸಿರುವಂತೆ |
| Application Start Date | May 6, 2019 |
| Application End Date | May 20, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆಯಿಂದ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಹುದ್ದೆಗಳಿಗೆ ಸಂಸ್ಥೆಯ ನಿಯಮಾನುಸಾರ (ಅಧಿಸೂಚನೆಯಲ್ಲಿ ನೀಡಿರುವಂತೆ) ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ (ಅಧಿಸೂಚನೆಯಲ್ಲಿ ತಿಳಿಸಿರುವಂತೆ) ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 1,000/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಬಿಡಿ / ಮಾಜಿ ಸೈನಿಕ ಅಭ್ಯರ್ಥಿಗಳು ಟೆಕ್ನೀಶಿಯನ್ , ಡ್ರಾಫ್ಟ್ಸ್‌ಮೆನ್ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಎಫ್‌ಎಸಿಟಿಯ ಅಧಿಕೃತ ವೆಬ್‌ಸೈಟ್ http://www.fact.co.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಹುದ್ದೆಗಳಿಗೆ ಸೇರಲು ಇಚ್ಛಿಸಿದ್ದಲ್ಲಿ ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 20.2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











