ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾಂವಕೂರ್ ಲಿಮಿಟೆಡ್ (ಎಫ್‌ಎಸಿಟಿ) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಡಿಪ್ಲೋಮಾ ಮತ್ತು ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರಿಂದ 25,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://fact.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 14,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಕಚೇರಿ ವಿಳಾಸ:
Dy General Manager (HR) IR,
FEDO Building,
The Fertilisers And Chemicals Travancore Limited,
Udyogamandal.
PIN -683 501.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.