ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ ಲಿಮಿಟೆಡ್ (ಎಫ್‌ಎಸಿಟಿ) ಡ್ರೈವರ್, ಅಟೆಂಡರ್ ಮತ್ತು ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿ ವಿಳಾಸ:
Dy General Manager (HR) IR,
FEDO building,
The Fertilisers and chemicals travancore limited,
Udyogamandal,
PIN-683501.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











