ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ (ಎಫ್ಎಸಿಟಿ) ನಲ್ಲಿ 45 ಟೆಕ್ನೀಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಕ್ಟೋಬರ್ 26,2022 ರಿಂದ ನವೆಂಬರ್ 16,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
FACT ನೇಮಕಾತಿ 2022 ವಿದ್ಯಾರ್ಹತೆ :
ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ (ಎಫ್ಎಸಿಟಿ) ನೇಮಕಾತಿಯ ಟೆಕ್ನೀಶಿಯನ್ ಹುದ್ದೆಗಳಿಗೆ ಡಿಪ್ಲೋಮಾ, ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
FACT ನೇಮಕಾತಿ 2022 ವಯೋಮಿತಿ :
ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ (ಎಫ್ಎಸಿಟಿ) ನೇಮಕಾತಿಯ ಟೆಕ್ನೀಶಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಕ್ಟೋಬರ್ 1,2022ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
FACT ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ (ಎಫ್ಎಸಿಟಿ) ನೇಮಕಾತಿಯ ಟೆಕ್ನೀಶಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ನೇರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
FACT ನೇಮಕಾತಿ 2022 ವೇತನ :
ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ (ಎಫ್ಎಸಿಟಿ) ನೇಮಕಾತಿಯ ಟೆಕ್ನೀಶಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,250/- ರಿಂದ 32,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
FACT ನೇಮಕಾತಿ 2022 ಅರ್ಜಿ ಶುಲ್ಕ :
ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ (ಎಫ್ಎಸಿಟಿ) ನೇಮಕಾತಿಯ ಟೆಕ್ನೀಶಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 590/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
FACT ನೇಮಕಾತಿ 2022 ಅರ್ಜಿ ಸಲ್ಲಿಕೆ :
ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ (ಎಫ್ಎಸಿಟಿ) ನೇಮಕಾತಿಯ ಟೆಕ್ನೀಶಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://fact.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 26,2022 ರಿಂದ ನವೆಂಬರ್ 16,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.