FCI Recruitment 2019: 330 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

ಭಾರತೀಯ ಆಹಾರ ನಿಗಮವು (ಎಫ್ ಸಿಐ) ಆಹಾರ ಧಾನ್ಯ ಪೂರೈಕೆ ನಿರ್ವಹಣೆಯೊಂದಿಗೆ ವ್ಯವಹರಿಸುವ ಒಂದು ಬೃಹತ್ ಸಾರ್ವಜನಿಕ ವಲಯದ ಉದ್ಯಮವಾಗಿದೆ. ಗ್ರಾಹಕ ವ್ಯವಹಾರಗಳ ಸಚಿವಾಲಯದಡಿ ಬರುವ ಆಹಾರ ಮತ್ತು ಸಾರ್ವಜನಿಕ ವಿತರಣೆ (ಆಹಾರ ನಿಗಮಗಳ ಕಾಯ್ದೆ 1964ಯಡಿ ಸ್ಥಾಪಿಸಲ್ಪಟ್ಟಿದ್ದು)ಯಡಿ ಭಾರತದೆಲ್ಲೆಡೆ ಡಿಪೋಗಳು ಮತ್ತು ಕಛೇರಿಗಳಿಗೆ ಖಾಲಿ ಇರುವ 330 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇಂದಿನಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 27,2019ರ ಸಂಜೆ 4ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಭಾರತೀಯ ಆಹಾರ ನಿಗಮ: ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

CRITERIA DETAILS
Name Of The Posts ಮ್ಯಾನೇಜರ್
Organisation ಭಾರತೀಯ ಆಹಾರ ನಿಗಮ (ಎಫ್‌ಸಿಐ)
Educational Qualification ಪದವಿ,ಬಿ.ಎಸ್ಸಿ, ಇಂಜಿನಿಯರಿಂಗ್ ಪದವಿ,ಸ್ನಾತಕೋತ್ತರ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 40,000/-ರಿಂದ 1,40,000/-ರೂ
Application Start Date September 28, 2019
Application End Date October 27, 2019

ವಿದ್ಯಾರ್ಹತೆ:

ಪದವಿ,ಬಿ.ಎಸ್ಸಿ, ಬಿ.ಇ ಮತ್ತು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಸೆಪ್ಟೆಂಬರ್ 1,2019ರ ಅನ್ವಯ ಗರಿಷ್ಟ 28 ಮತ್ತು 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರಿಂದ 1,40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, 800/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಭಾರತೀಯ ಆಹಾರ ನಿಗಮ (ಎಫ್‌ಸಿಐ)ದ ಅಧಿಕೃತ ವೆಬ್‌ಸೈಟ್‌ http://www.fci.gov.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 27,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
FCI Recruitment 2019-20: Apply Online for 330 Manager Vacancies. Food Corporation of India (FCI) invited Online applications from eligible and interested candidates to fill up Manager Posts through FCI official notification September 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+