FCI Recruitment 2022 : 5043 ಅಸಿಸ್ಟೆಂಟ್ ಗ್ರೇಡ್ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಆಹಾರ ನಿಗಮವು 5043 ಅಸಿಸ್ಟೆಂಟ್ ಗ್ರೇಡ್ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 

ಅರ್ಹ ಅಭ್ಯರ್ಥಿಗಳು ಆನ್ಲೈನ್‌ ಮೂಲಕ ಸೆಪ್ಟೆಂಬರ್ 6,2022 ರಿಂದ ಅಕ್ಟೋಬರ್ 5,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಭಾರತೀಯ ಆಹಾರ ನಿಗಮದಲ್ಲಿ 5043 ಹುದ್ದೆಗಳ ನೇಮಕಾತಿ

FCI ನೇಮಕಾತಿ 2022 ವಿದ್ಯಾರ್ಹತೆ :

ಭಾರತೀಯ ಆಹಾರ ನಿಗಮ ನೇಮಕಾತಿಯ ಅಸಿಸ್ಟೆಂಟ್ ಗ್ರೇಡ್ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಬಿ.ಇ/ಬಿ.ಟೆಕ್, ಬಿ.ಎಸ್ಸಿ ಬಿ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

FCI ನೇಮಕಾತಿ 2022 ವಯೋಮಿತಿ :

ಭಾರತೀಯ ಆಹಾರ ನಿಗಮ ನೇಮಕಾತಿಯ ಅಸಿಸ್ಟೆಂಟ್ ಗ್ರೇಡ್ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

FCI ನೇಮಕಾತಿ 2022 ವೇತನ :

ಭಾರತೀಯ ಆಹಾರ ನಿಗಮ ನೇಮಕಾತಿಯ ಅಸಿಸ್ಟೆಂಟ್ ಗ್ರೇಡ್ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 28,200/- ರಿಂದ 1,03,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

FCI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ಆಹಾರ ನಿಗಮ ನೇಮಕಾತಿಯ ಅಸಿಸ್ಟೆಂಟ್ ಗ್ರೇಡ್ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

FCI ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ಆಹಾರ ನಿಗಮ ನೇಮಕಾತಿಯ ಅಸಿಸ್ಟೆಂಟ್ ಗ್ರೇಡ್ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

FCI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತೀಯ ಆಹಾರ ನಿಗಮ ನೇಮಕಾತಿಯ ಅಸಿಸ್ಟೆಂಟ್ ಗ್ರೇಡ್ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://fci.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಸೆಪ್ಟೆಂಬರ್ 6,2022 ರಿಂದ ಅಕ್ಟೋಬರ್ 5,2022ರೊಳಗೆ ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
FCI recruitment 2022 notification has been released for 5043 assistant grade and junior engineer posts. Interested candidates can apply before October 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X