FCI Recruitment 2022 : 89 ವಿವಿಧ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಆಹಾರ ನಿಗಮವು 89 ವಿವಿಧ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್ಲೈನ್‌ ಮೂಲಕ ಮಾರ್ಚ್ 1,2022 ರಿಂದ ಮಾರ್ಚ್ 31,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಭಾರತೀಯ ಆಹಾರ ನಿಗಮದಲ್ಲಿ ವಿವಿಧ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

FCI ನೇಮಕಾತಿ 2022 ವಿದ್ಯಾರ್ಹತೆ :

ಭಾರತೀಯ ಆಹಾರ ನಿಗಮ ನೇಮಕಾತಿಯ ವಿವಿಧ ವ್ಯವಸ್ಥಾಪಕ ಹುದ್ದೆಗಳಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

FCI ನೇಮಕಾತಿ 2022 ವಯೋಮಿತಿ :

ಭಾರತೀಯ ಆಹಾರ ನಿಗಮ ನೇಮಕಾತಿಯ ವಿವಿಧ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ ೨೮ ರಿಂದ ೩೫ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

FCI ನೇಮಕಾತಿ 2022 ವೇತನ :

ಭಾರತೀಯ ಆಹಾರ ನಿಗಮ ನೇಮಕಾತಿಯ ವಿವಿಧ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,80,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

FCI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ಆಹಾರ ನಿಗಮ ನೇಮಕಾತಿಯ ವಿವಿಧ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

FCI ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ಆಹಾರ ನಿಗಮ ನೇಮಕಾತಿಯ ವಿವಿಧ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 1,000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

FCI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತೀಯ ಆಹಾರ ನಿಗಮ ನೇಮಕಾತಿಯ ವಿವಿಧ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://fci.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 1,2022 ರಿಂದ ಮಾರ್ಚ್ 31,2022ರೊಳಗೆ ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
FCI recruitment 2022 notification has been released for 89 various managerial posts. Interested candidates can apply before March 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+