ಫುಡ್ ಸೇಫ್ಟಿ ಅಂಡ್ ಸ್ಟಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ ( FSSAI) 44 ಸಹಾಯಕ ನಿರ್ದೇಶಕರು ಮತ್ತು ವೈಯಕ್ತಿಕ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 11,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಸಹಾಯಕ ನಿರ್ದೇಶಕರು ಮತ್ತು ವೈಯಕ್ತಿಕ ಕಾರ್ಯದರ್ಶಿ |
| Organisation | ಫುಡ್ ಸೇಫ್ಟಿ ಅಂಡ್ ಸ್ಟಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ (FSSAI) |
| Educational Qualification | ನೇಮಕಾತಿ ನಿಯಮಾನುಸಾರ |
| Job Location | ಭಾರತದೆಲ್ಲೆಡೆ |
| Salary Scale | ನೇಮಕಾತಿ ನಿಯಮಾನುಸಾರ |
| Application Start Date | October 16, 2019 |
| Application End Date | November 11, 2019 |
ವಿದ್ಯಾರ್ಹತೆ:
ಫುಡ್ ಸೇಫ್ಟಿ ಅಂಡ್ ಸ್ಟಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ(FSSAI)ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಳು ಅರ್ಜಿಯನ್ನುಸಲ್ಲಿಸಬಹುದು.
ವಯೋಮಿತಿ:
ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ ಓಬಿಸಿ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು FSSAI ನ ಅಧಿಕೃತ ವೆಬ್‌ಸೈಟ್ https://www.fssai.gov.in/ ಗೆ ಹೋಗಿ
ಸ್ಟೆಪ್ 2: ನಂತರ FSSAI ಪೇಜ್ ಕೆಳಗಡೆ ಇರುವ Careers ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: FSSAI ಹುದ್ದೆಗಳ ಅಧಿಸೂಚನೆಯನ್ನು ಹುಡುಕಿ ತೆರೆಯಿರಿ
ಸ್ಟೆಪ್ 4: ನಂತರ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಗಮನವಿಟ್ಟು ಓದಿ
ಸ್ಟೆಪ್ 5: ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ
ಸ್ಟೆಪ್ 6: ಎಲ್ಲವೂ ಸಂಪೂರ್ಣಗೊಂಡ ನಂತರ ಕೊನೆಯಲ್ಲಿ submit ಮಾಡಿ
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











